×
Ad

ಮೂಡುಬಿದಿರೆಯಲ್ಲಿ ಮುಖ್ಯಮಂತ್ರಿಗೆ ಕರಿಪತಾಕೆ ಪ್ರದರ್ಶನಕ್ಕೆ ಸಿದ್ಧತೆ: ಬಿಜೆಪಿ ನಾಯಕರ ಬಂಧನ, ಬಿಡುಗಡೆ

Update: 2018-01-07 18:23 IST

ಮೂಡುಬಿದಿರೆ, ಜ.7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಡುಬಿದಿರೆಗೆ ಆಗಮಿಸುವ ಸಂದರ್ಭ ಕರಿಪತಾಕೆ ಪ್ರದರ್ಶನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದಾರೆ.

ಕರಿಪತಾಕೆ ಪ್ರದರ್ಶಿಸಲು ಸಿದ್ಧತೆ ನಡೆಸಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ, ಈಶ್ವರ ಕಟೀಲ್ ಸಹಿತ 15 ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News