×
Ad

ಕಾವೇರಿ ತಾಲೂಕಿಗೆ ಒತ್ತಾಯಿಸಿ ಬೈಕ್ ಜಾಥಾ, ಮಾನವ ಸರಪಳಿ

Update: 2018-01-07 23:06 IST

ಸುಂಟಿಕೊಪ್ಪ, ಜ.7: ಕುಶಾಲನಗರವನ್ನು ಕೇಂದ್ರವಾಗಿಸಿ ಕಾವೇರಿ ತಾಲೂಕು ರಚಿಸಬೇಕೆಂದು ಆಗ್ರಹಿಸಿ ಕಾವೇರಿ ತಾಲೂಕು ಗದ್ದೆಹಳ್ಳದಿಂದ ಸುಂಟಿಕೊಪ್ಪಹಾಗೂ ಕುಶಾಲನಗರದವರೆಗೆ ಬೈಕ್ ಜಾಥಾ ನಡೆಸಿ ಕನ್ನಡ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರ್ತೆ ತಡೆ ಚಳುವಳಿ ನಡೆಸಲಾಯಿತು.

ಈ ವೇಳೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಕಾವೇರಿ ತಾಲೂಕು ಹೋರಾಟ ಸಮಿತಿ ಸದಸ್ಯ ಎಂ.ಎ.ಉಸ್ಮಾನ್, ಈ ಹೋರಾಟದಲ್ಲಿ ಕೇವಲ ಕೂಲಿ ಕಾರ್ಮಿಕರು ಮಧ್ಯಮ ವರ್ಗದವರೇ ಹೆಚ್ಚಾಗಿ ಭಾಗವಹಿಸುತ್ತಾರೆ. ತಾ.9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊಡಗಿಗೆ ಭೇಟಿ ನೀಡುವಾಗ ಅವರಿಗೆ ಮನವಿ ಆರ್ಪಿಸಿ ಕಾವೇರಿ ತಾಲೂಕು ನೀಡಬೇಕೆಂದು ಹಕ್ಕೊತ್ತಾಯ ಮಾಡಲಾಗುವುದು ಎಂದರು.

ಸುಂಟಿಕೊಪ್ಪಗ್ರಾಪಂ ಸದಸ್ಯ ಕೆ.ಇ.ಕರೀಂ ಮಾತನಾಡಿ, 20 ವರ್ಷದಗಳಿಂದ ಕಾವೇರಿ ತಾಲೂಕಿಗಾಗಿ ಹೋರಾಟ ನಡೆಸಿದ್ದರೂ 50 ತಾಲೂಕು ರಚಿಸುವಾಗ, ನಮ್ಮ ತಾಲೂಕನ್ನು ಕೈ ಬಿಟ್ಟಿರುವುದು ಸರಿಯಲ್ಲ. ಈ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಸುಂಟಿಕೊಪ್ಪ ಕಾವೇರಿ ತಾಲೂಕು ಸ್ಥಾನೀಯ ಸಮಿತಿ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

 ಈ ಸಂದರ್ಭದಲ್ಲಿ ಸುಂಟಿಕೊಪ್ಪಗ್ರಾಪಂ ಅಧ್ಯಕ್ಷೆ ರೋಸ್‌ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಸದಸ್ಯ ಶಾಹೀದ್, ಅಣ್ಣಾ ಶರೀಫ್, ಪಿ.ಆರ್.ಸುನೀಲ್‌ಕುಮಾರ್ ಮತ್ತಿತರರು ಇದ್ದರು.

ಬೆಂಬಲ: ಜಿಲ್ಲಾ ಕಾರ್ಮಿಕ ಹಾಗೂ ಚಾಲಕರ ಸಂಘದ ವತಿಯಿಂದ ಕಾವೇರಿ ತಾಲೂಕು ಹೋರಾಟ ಸಮಿತಿಗೆ ಬೆಂಬಲ ನೀಡುವುದಾಗಿ ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್.ಶರೀಫ್ ಹಾಗೂ ಪದಾಧಿಕಾರಿಗಳು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News