ಮುಂಬೈ: ಸತ್ರ ನ್ಯಾಯಾಲಯದ ಕಟ್ಟಡದಲ್ಲಿ ಬೆಂಕಿ
Update: 2018-01-08 21:19 IST
ಲಕ್ನೋ, ಜ. 8: ಇಲ್ಲಿನ ಸತ್ರ ನ್ಯಾಯಾಲಯದ ಕಟ್ಟಡದ ಮೂರನೇ ಮಹಡಿಯಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. ಮುಂಬೈ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಸಮೀಪ ಇರುವ ನ್ಯಾಯಾಲಯದ ಕಟ್ಟಡದಲ್ಲಿ ಬೆಳಗ್ಗೆ 7.15ಕ್ಕೆ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತತ್‌ಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಬೆಂಕಿಯಿಂದ ಆದ ಹಾನಿ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.