×
Ad

ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗದ ಸಿದ್ಧತೆ

Update: 2018-01-08 22:14 IST

ಬೆಂಗಳೂರು, ಜ.8: ಪ್ರಸಕ್ತ ಸಾಲಿನ ಎಪ್ರಿಲ್ ಅಥವಾ ಮೇನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಸಿದ್ಧತೆಗಳನ್ನು ಆರಂಭಿಸಿದೆ.

ಕೇಂದ್ರ ಚುನಾವಣಾ ಆಯೋಗದ ಉಪ ನಿರ್ದೇಶಕರ ತಂಡವು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದ್ದು, ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಸಿದ್ಧತೆಗಳ ಕುರಿತು ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದೆ.

ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಜತೆ ಚುನಾವಣಾ ಆಯೋಗದ ಉಪ ನಿರ್ದೇೀಶಕರು ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಬೆಂಗಳೂರಿಗೆ ಆಗಮಿಸುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News