×
Ad

ಮಂಗಳೂರು: ಜಮೀಯ್ಯತುಲ್ ಫಲಾಹ್‌ನಿಂದ ಚಿಂತನಾ ಸಭೆ

Update: 2018-01-08 22:17 IST

ಮಂಗಳೂರು, ಜ.8: ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ. ಜಿಪಂ ಇದರ ಸಹಯೋಗದೊಂದಿಗೆ ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಯ ಬಗ್ಗೆ ಚಿಂತನಾ ಸಭೆಯು ಜೆ.ಎಫ್. ಸಮುದಾಯ ಭವನದಲ್ಲಿ ನಡೆಯಿತು.

ಜೆ.ಎಫ್. ಕೇಂದ್ರ ಸಮಿತಿಯ ಅಧ್ಯಕ್ಷ ಹಾಗೂ ದ.ಕ.ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಎಸೆಸೆಲ್ಸಿ ಶಿಕ್ಷಣದ ಮಹತ್ವ, ಫಲಿತಾಂಶವನ್ನು ವೃದ್ಧಿಸುವಲ್ಲಿ ಶಿಕ್ಷಕರ ಪಾತ್ರ, ವಿದ್ಯಾರ್ಥಿಗಳ ಪೋಷಕರ ಸಹಕಾರ ಮತ್ತು ಸಂಘ ಸಂಸ್ಥೆಗಳು, ಧಾರ್ಮಿಕ ಮುಖಂಡರ ಜವಾಬ್ದಾರಿತನದ ಬಗ್ಗೆ ಪ್ರಾಸ್ತಾವಿಸಿದರು.

ದ.ಕ.ಜಿಪಂ ಸಿಇಒ ಡಾ.ಎಂ.ಆರ್.ರವಿ, ಡಿಡಿಪಿಐ ಶಿವರಾಮಯ್ಯ ಮಾತನಾಡಿದರು. ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜೆ.ಎಫ್. ಕೇಂದ್ರ ಸಮಿತಿಯ ಕೋಶಾಧಿಕಾರಿ ಇಬ್ರಾಹೀಂ ಕೋಡಿಜಾಲ್ ಉಪಸ್ಥಿತರಿದ್ದರು.

ದ.ಕ. ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರೌಢಶಾಲೆಯ ಮುಖ್ಯಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಮತ್ತು ಜೆ.ಎಫ್. ಘಟಕಗಳ ಸದಸ್ಯರು ಪಾಲ್ಗೊಂಡಿದ್ದರು.

ಜೆ.ಎಫ್.ಪ್ರಧಾನ ಕಾರ್ಯದರ್ಶಿ ಸಲೀಂ ಹಂಡೇಲ್ ವಂದಿಸಿದರು. ಶಿಕ್ಷಣ ಇಲಾಖೆಯ ಶಮಂತ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News