×
Ad

ಗಂಗೊಳ್ಳಿ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Update: 2018-01-08 23:21 IST

ಗಂಗೊಳ್ಳಿ, ಜ.8 ಗಂಗೊಳ್ಳಿ ಜಾಮಿಯಾ ಮಸೀದಿಯ ಹಿಂಭಾಗದಲ್ಲಿರುವ ಮನೆಯೊಂದರ ಆವರಣದಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಹಚ್ಚಿದ್ದರಿಂದ ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ವರದಿಯಾಗಿದೆ.

ಮಸೀದಿ ಹಿಂಬದಿಯ ನಿವಾಸಿ ಅಬ್ದುಲ್ ಮಜೀದ್ ಎಂಬವರಿಗೆ ಸೇರಿದ ಬೈಕ್ ಇದಾಗಿದೆ. ಮಜೀದ್ ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಬೈಕಿನಲ್ಲಿ ಬಂದು ಮಲಗಿದ್ದರು. ತಡರಾತ್ರಿ ಮನೆಯ ಆವರಣಕ್ಕೆ ನುಗ್ಗಿದ ಕಿಡಿಗೇಡಿಗಳು ಬೈಕ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ಬೈಕ್ ಸಂಪೂರ್ಣ ನಾಶವಾಗಿದೆ.

ಘಟನಾ ಸ್ಥಳಕ್ಕೆ ಗಂಗೊಳ್ಳಿ ಎಸ್ಸೈ ವಿನಾಯಕ ಬಿಲ್ಲವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುಷ್ಕೃತ್ಯದ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News