ಮಡಿಕೇರಿ: ಸಿ.ಎಂ ವಿರುದ್ಧ ಪ್ರತಿಭಟನೆಗೆ ಮುಂದಾದವರ ಬಂಧನ
Update: 2018-01-09 19:52 IST
ಮಡಿಕೇರಿ ಜ.9 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸಂಘಪರಿವಾರ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದ ಸಂದರ್ಭ ಪೊಲೀಸರು ಬಂಧಿಸಿದರು.
ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭ ಕಪ್ಪು ಪಟ್ಟಿಯೊಂದಿಗೆ ಪ್ರತಿಭಟನೆಗೆ ಮುಂದಾದಾಗ ಪೊಲೀಸರು ತಡೆದರು. ನಂತರ ಅಲ್ಲಿಂದ ತೆರಳಿದ ಕಾರ್ಯಕರ್ತರು ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಬಾಯಿಗೆ ಕಪ್ಪುಪಟ್ಟಿ ಕಟ್ಟಿ ಮೌನ ಪ್ರತಿಭಟನೆಗೆ ಮುಂದಾದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.