×
Ad

ಹಿಟ್ ಅಂಡ್ ರನ್ ಪ್ರಕರಣ : ಸ್ಥಳದಲ್ಲಿಯೇ ಇಬ್ಬರ ಮೃತ್ಯು

Update: 2018-01-09 20:04 IST

ಶಿವಮೊಗ್ಗ, ಜ. 9: ವೇಗವಾಗಿ ಆಗಮಿಸಿದ ಪಿಕಪ್ ವಾಹನವೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತಲವಾಟ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. 

ಕಾರವಾರ ಜಿಲ್ಲೆ ಸಿದ್ದಾಪುರ ತಾಲೂಕು ಹಸುವಂತೆ ಗ್ರಾಮದ ನಿವಾಸಿಗಳಾದ ಯುವರಾಜ (25) ಹಾಗೂ ಮಂಜುನಾಥ (28) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದ ನಂತರ ಪಿಕಪ್ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. 

ವೇಗದ ಚಾಲನೆ: ಯುವರಾಜ ಹಾಗೂ ಮಂಜುನಾಥರವರು ಜೋಗಕ್ಕೆ ಬೈಕ್‍ನಲ್ಲಿ ಆಗಮಿಸುತ್ತಿದ್ದರು. ಮಿತಿಮೀರಿದ ವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿಕೊಂಡು ಆಗಮಿಸಿದ ಪಿಕಪ್ ಚಾಲಕ ಬೈಕ್ ಗೆ ಢಿಕ್ಕಿ ಹೊಡೆದಿದ್ದಾನೆ. ಇದರಿಂದ ಬೈಕ್ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದು, ಮರಕ್ಕೆ ಢಿಕ್ಕಿ ಹೊಡೆದಿದೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News