×
Ad

ಜ.11 ರಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟ

Update: 2018-01-09 20:24 IST

ಉಡುಪಿ, ಜ.9: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿ ಯಿಂದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜ.11 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಜ.11ರ ಬೆಳಗ್ಗೆ 10:30ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News