×
Ad

ಉಡುಪಿ: ಉದ್ಯಮಶೀಲತಾ ತರಬೇತಿ ಕಾರ್ಯಾಗಾರ

Update: 2018-01-09 20:27 IST

ಉಡುಪಿ, ಜ.9: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ಟಡಿ ಸರ್ಕಲ್ ಯೋಜನೆಯಡಿಯಲ್ಲಿ ಉದ್ಯಮಶೀಲತಾ ತರಬೇತಿ ಕಾರ್ಯಾಗಾರವು ಬೈಂದೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ತಾಂತ್ರಿಕತೆ ಮತ್ತು ಉದ್ಯಮಶೀಲತೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಆಜಾದ್ ಸಂಸ್ಥೆಯ ಇಂಜಿನಿಯ ರಿಂಗ್ ಟೆಕ್ನಾಲಜಿ ವಿಭಾಗದ ಮಾರ್ಗದರ್ಶಕ ಷಣ್ಮುಖ ಅವರು ಆಧುನಿಕ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.

ಲಿಪಿ ಇನ್ಫೋಮ್ಯಾಟಿಕ್‌ನ ಸುಬ್ರಹ್ಮಣ್ಯ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ತರಬೇತುದಾರ ಜಗತ್ ಕೆ. ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News