×
Ad

ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು

Update: 2018-01-09 20:30 IST

ಬೆಂಗಳೂರು, ಜ.9: ಮನೆ ಮಹಡಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಮೂಲದ ಅಖೀಬ್ ಬೇಗ್(20) ಮೃತಪಟ್ಟ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಎಂಜೆ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದ ಅಖೀಬ್, ಕಾಡುಗೋಡಿಯ ಇಂಡೇನ್ ಗ್ಯಾಸ್ ಗೋಡೌನ್ ಸಮೀಪದ ಸಿದ್ದೇಶ್ವರ ನಿಲಯದ ಕಟ್ಟಡದ 3ನೆ ಮಹಡಿಯಲ್ಲಿ ವಾಸವಾಗಿದ್ದನು ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಮುಂಜಾನೆ ಕಸ ಎಸೆಯಲು ಕಟ್ಟಡದಿಂದ ಬಗ್ಗಿದಾಗ ಆಯತಪ್ಪಿಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News