×
Ad

ಎಚ್.ಡಿ. ಕುಮಾರ ಸ್ವಾಮಿ ವಿರುದ್ಧ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ: ಡಾ.ಭರತ್ ಶೆಟ್ಟಿ

Update: 2018-01-09 20:50 IST

ಮಂಗಳೂರು, ಜ.9:  ಕಾಟಿಪಳ್ಳದ ದೀಪಕ್ ರಾವ್ ಹತ್ಯೆ ಪ್ರಕಣದಲ್ಲಿ ಬಿಜೆಪಿ ಕಾರ್ಯಕರ್ತರ ಪಾತ್ರವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮಾಡಿರುವ ಆರೊಪದ ವಿರುದ್ಧ ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಮಂಗಳೂರು ಉತ್ತರ ವಲಯ ಬಿಜೆಪಿಯ ಅಧ್ಯಕ್ಷ ಡಾ. ಭರತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಕುಮಾರಸ್ವಾಮಿ ಆಧಾರ ರಹಿತವಾಗಿ ಈ ರೀತಿಯ ಹೇಳಿಕೆ ನೀಡುತ್ತಿರುವ ಬಗ್ಗೆ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಪಕ್ಷದ ವತಿಯಿಂದ ದೂರು ನೀಡಲಾಗಿದ್ದು, ಯಾವೂದೇ ಕಾರಣಕ್ಕೆ ಹಿಂದೆಗೆಯುವುದಿಲ್ಲ ಎಂದು ಡಾ. ಭರತ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಘಟಕದ ಪದಾಧಿಕಾರಿಗಳಾದ ವಿಕಾಸ್ ಪುತ್ತೂರು, ಅಶೋಕ್ ಕೃಷ್ಣಾಪುರ, ಸುಧಾಕರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News