ಜ.12: ರಾಜ್ಯಮಟ್ಟದ ವಿಚಾರ ಸಂಕಿರಣ
Update: 2018-01-09 21:02 IST
ಮಂಗಳೂರು, ಜ.9: ಕನ್ನಡ ಸಂಸ್ಕೃತಿ ಇಲಾಖೆ, ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪಪ್ರತಿಷ್ಠಾನ ಬೆಂಗಳೂರು ಮತ್ತು ವಿವಿ ಪದವಿ ಕಾಲೇಜು ಕನ್ನಡ ಅಧ್ಯಾಪಕರ ಸಂಘ (ವಿಕಾಸ) ಹಾಗೂ ವಿವಿ ಕಾಲೇಜು ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜ.12ರಂದು ಬೆಳಗ್ಗೆ 10ಕ್ಕೆ ವಿವಿ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ‘ಪಂಪ-ಅನೇಕ ಓದುಗಳ ಅನುಸಂಧಾನ’ ಎಂಬ ವಿಷಯದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.