ಐಎಸ್‌ಐ ಮುದ್ರೆ ಹೊಂದಿರದ ಹೆಲ್ಮೆಟ್ ಧರಿಸಿ ಅಪಘಾತವಾದರೆ ವಿಮಾ ಹಣ ಪಡೆಯಲು ಅರ್ಹರಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Update: 2018-01-09 16:27 GMT

ಬೆಂಗಳೂರು, ಜ.9: ಐಎಸ್‌ಐ ಮುದ್ರೆ ಹೊಂದಿರದ ಹೆಲ್ಮೆಟ್ ಧರಿಸಿ ಅಪಘಾತಕ್ಕೊಳಗಾಗಿ ಪ್ರಾಣ ಕಳೆದುಕೊಂಡರೆ ಅಥವಾ ಅಂಗ ಊನವಾದರೆ ಅಂತಹ ವಾಹನ ಸವಾರರು ವಿಮಾ ಹಣ ಪಡೆಯಲು ಅರ್ಹರಲ್ಲ ಎಂದು ಹೈಕೆರ್ಟ್ ಮಹತ್ವದ ತೀರ್ಪು ನೀಡಿದೆ.

ಬಸ್ ಮತ್ತು ಬೈಕ್ ನಡುವಿನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರಿಗೆ 2.5 ಲಕ್ಷ ರೂ. ಪರಿಹಾರ ನೀಡುವಂತೆ ಅಧೀನ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಓರಿಯಂಟಲ್ ವಿಮಾ ಕಂಪೆನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

ಮೋಟಾರು ಸೈಕಲ್ ಹಾಗೂ ಸ್ಕೂಟರ್ ಸೇರಿ ದ್ವಿಚಕ್ರ ವಾಹನಗಳ ಸವಾರರು ಕರ್ನಾಟಕದ ಯಾವುದೇ ಭಾಗದಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯ. ಮೋಟಾರು ವಾಹನ ಕಾಯ್ದೆಯು ಸೆಕ್ಷನ್ 230ರನ್ವಯ ರಕ್ಷಣಾತ್ಮಕ ಹೆಲ್ಮೆಟ್ ಅನ್ನೇ ಹಾಕಿಕೊಳ್ಳಬೇಕು. ಐಎಸ್‌ಐ ಮುದ್ರೆ ಹೊಂದಿದ ಹೆಲ್ಮೆಟ್ ಧರಿಸದೆ ಅಪಘಾತದಲ್ಲಿ ಗಾಯಗೊಂಡರೆ ವಿಮೆ ಹಣ ಪಡೆಯಲು ಅರ್ಹರಾಗಿರುವುದಿಲ್ಲ ಹಾಗೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ವಿವರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News