ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ರಬಾಡ ನಂ.1

Update: 2018-01-09 18:41 GMT

ದುಬೈ,ಜ.9: ಐಸಿಸಿ ಟೆಸ್ಟ್ ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ ದಕ್ಷಿಣ ಆಫ್ರಿಕದ ವೇಗದ ಬೌಲರ್ ಕಾಗಿಸೊ ರಬಾಡ ಅವರು ನಂ.1 ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ.

 ಇಂದು ಪ್ರಕಟ ಗೊಂಡಿರುವ ಟೆಸ್ಟ್ ಆಟಗಾರರ ಪಟ್ಟಿಯಲ್ಲಿ ಭಾರತದ ವಿರುದ್ಧದ ಮೊದಲ ಕ್ರಿಕೆಟ್ ಟೆಸ್ಟ್ ನ ಎರಡನೇ ಇನಿಂಗ್ಸ್ ನಲ್ಲಿ 42ಕ್ಕೆ 6 ವಿಕೆಟ್ ಉಡಾಯಿಸುವ ಮೂಲಕ ಜೀವನಶ್ರೇಷ್ಠ ಸಾಧನೆ ಮಾಡಿರುವ ವೆರ್ನಾನ್ ಫಿಲ್ಯಾಂಡರ್ 6ನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ.

ರಬಾಡ ಅವರು ಪ್ರಥಮ ಟೆಸ್ಟ್ ನಲ್ಲಿ ಐದು ವಿಕೆಟ್ ಉಡಾಯಿಸಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ ಅವರನ್ನು ರಬಾಡ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

 ಭಾರತದ ದಾಂಡಿಗರ ಪೈಕಿ ನಾಯಕ ವಿರಾಟ್ ಕೊಹ್ಲಿ ಮತ್ತು ಮಧ್ಯಮ ಸರದಿಯ ದಾಂಡಿಗ ಚೇತೇಶ್ವರ ಪೂಜಾರ ಅವರು ಹಿನ್ನಡೆ ಅನುಭವಿಸಿದ್ದಾರೆ. ಭಾರತದ ಬೌಲರ್‌ಗಳಾದ ಭುವನೇಶ್ವರ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಭಡ್ತಿ ಪಡೆದಿದ್ದಾರೆ.

ದಕ್ಷಿಣ ಆಫ್ರಿಕ ವಿರುದ್ಧದ ಮೊದಲ ಕ್ರಿಕೆಟ್ ಟೆಸ್ಟ್‌ನಲ್ಲಿ ಕೊಹ್ಲಿ ಒಟ್ಟು 33 ರನ್ ಗಳಿಸುವ ಮೂಲಕ ಕಳಪೆ ಪ್ರದರ್ಶನ ನೀಡಿದ್ದರು. ಇದರಿಂದಾಗಿ 13 ಪಾಯಿಂಟ್‌ಗಳನ್ನು ಕಳೆದುಕೊಂಡಿದ್ದರು. ರ್ಯಾಂಕಿಂಗ್‌ನಲ್ಲಿ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇದೇ ವೇಳೆ ಇಂಗ್ಲೆಂಡ್‌ನ ನಾಯಕ ಜೋ ರೂಟ್ ಆಸ್ಟ್ರೇಲಿಯ ವಿರುದ್ಧ ಆ್ಯಶಸ್ ಸರಣಿಯ ಐದನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ ್ಟನಲ್ಲಿ 141 ರನ್ ಗಳಿಸಿದ್ದರು. ಅವರು ಕೊಹ್ಲಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿ ಟೆಸ್ಟ್ ಬ್ಯಾಟ್ ್ಸಮನ್‌ಗಳ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ನ್ಯೂಝಿಲೆಂಡ್‌ನ ಕೇನ್ ವಿಲಿಯಮ್ಸನ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಚೇತೇಶ್ವರ ಪೂಜಾರ 2 ಸ್ಥಾನಗಳನ್ನು ಕಳೆದುಕೊಂಡು ಐದನೇ ಸ್ಥಾನ ಗಳಿಸಿದ್ದಾರೆ. ಇದೇ ವೇಳೆ ಮುರಳಿ ವಿಜಯ್, ಶಿಖರ್ ಧವನ್ , ರೋಹಿತ್ ಶರ್ಮ ಮತ್ತು ಶಿಖರ್ ಧವನ್ ಅವರು ಹಿಂಭಡ್ತಿ ಪಡೆದಿದ್ದಾರೆ.

►ಭುವನೇಶ್ವರ, ಪಾಂಡ್ಯಗೆ ಭಡ್ತಿ : ಕೇಪ್‌ಟೌನ್‌ನಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಭುವನೇಶ್ವರ ಕುಮಾರ್ ಅವರು 8 ಸ್ಥಾನಗಳಷ್ಟು ಭಡ್ತಿ ಪಡೆದು 22ನೇ ಸ್ಥಾನ ಮತ್ತು ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಪ್ರದರ್ಶನದ ನೆರವಿನಲ್ಲಿ 49ನೇ ಸ್ಥಾನಕ್ಕೆ ಏರಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಬಾಂಗ್ಲಾದ ಶಾಕೀಬ್ ಅಲ್ ಹಸನ್ ನಂ.1, ರವೀಂದ್ರ ಜಡೇಜ ಮತ್ತು ರವಿಚಂದ್ರನ್ ಅಶ್ವಿನ್ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ವೆರ್ನಾನ್ ಫಿಲ್ಯಾಂಡರ್ 42ಕ್ಕೆ 6 ವಿಕೆಟ್ ಪಡೆದು 12ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಸ್ಮಿತ್ ಮತ್ತೆ ನಂ.1: ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಆ್ಯಶಸ್ ಸರಣಿಯಲ್ಲಿ ಮೂರು ಶತಕ ಮತ್ತು 2 ಅರ್ಧಶತಕಗಳೊಂದಿಗೆ 687 ರನ್ ಸಂಪಾದಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್‌ನಲ್ಲಿ ಮತ್ತೆ ನಂ.1 ಸ್ಥಾನ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News