ರಿಕಿ ಪಾಂಟಿಂಗ್ ಆಸ್ಟ್ರೇಲಿಯದ ಟ್ವೆಂಟಿ-20 ತಂಡಕ್ಕೆ ಸಹಾಯಕ ಕೋಚ್

Update: 2018-01-09 19:01 GMT

ಸಿಡ್ನಿ, ಜ.9: ಮುಂದಿನ ತಿಂಗಳು ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ವಿರುದ್ಧ ಟ್ವೆಂಟಿ-20 ಕ್ರಿಕೆಟ್ ಸರಣಿಯನ್ನಾಡಲಿರುವ ಆಸ್ಟ್ರೇಲಿಯ ತಂಡಕ್ಕೆ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ನೇಮಕಗೊಂಡಿದ್ದಾರೆ.

ಆಸ್ಟ್ರೇಲಿಯದ ಕೋಚ್ ಆಗಿರುವ ಮಾಜಿ ನಾಯಕ ಡರೆನ್ ಲೆಹ್ಮನ್ ಅವರ ಬಳಗದಲ್ಲಿ ಪಾಂಟಿಂಗ್ ಇದೀಗ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಸ್ಥಾನ ಪಡೆದಿದ್ದಾರೆ.

  ಲೆಹ್ಮನ್ ಅವರು 2019ರ ಅಂತ್ಯದ ತನಕ ಆಸ್ಟ್ರೇಲಿಯ ಕ್ರಿಕೆಟ್ ತಂಡದ ಕೋಚ್ ಆಗಿರುತ್ತಾರೆ. ಲೆಹ್ಮನ್ ತಾನು ಕೋಚ್ ಆಗಿ ಮಾಡಿಕೊಂಡಿರುವ ಒಪ್ಪಂದವನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಕಾರಣದಿಂದಾಗಿ ಪಾಂಟಿಂಗ್ ಅವರು ಲೆಹ್ಮನ್ ಅವರ ಉತ್ತರಾಧಿಕಾರಿಯಾಗಿ ಮುಂದೆ ನೇಮಕಗೊಳ್ಳುವ ಸಾಧ್ಯತೆ ಇದೆ. ಇದೇ ಕಾರಣಕ್ಕಾಗಿ ಪಾಂಟಿಂಗ್ ಅವರನ್ನು ಕೋಚಿಂಗ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

 ಪಾಂಟಿಂಗ್ ಅವರು ಕಳೆದ ವರ್ಷ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಗೆ ನ್ಯೂಝಿಲೆಂಡ್ ತಂಡದ ಕೋಚ್ ಆಗಿದ್ದರು. 2005ರಲ್ಲಿ ಮೊದಲ ಬಾರಿ ನ್ಯೂಝಿಲೆಂಡ್ ವಿರುದ್ಧದ ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಯಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದರು. 2007 ಮತ್ತು 2009ರಲ್ಲಿ ನಡೆದ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News