×
Ad

ದೀಪಕ್ ಕೊಲೆ ಪ್ರಕರಣದಲ್ಲಿ ಕರ್ತವ್ಯ ನಿಷ್ಠೆ ಮೆರೆದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

Update: 2018-01-11 22:37 IST

ಮಂಗಳೂರು, ಜ. 11: ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪರಾರಿಯಾಗಳು ಪ್ರಯತ್ನಿಸಿದ ಆರೋಪಿಗಳನ್ನು ಹಿಡಿಯಲು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಂಜೆ ಎಂಬಲ್ಲಿ ಬ್ಯಾರಿಕೇಡ್ ಹಾಕಿ ವಾಹನವನ್ನು ತಪಾಸಣೆ ಮಾಡುತ್ತಿದ್ದ ಸಂದರ್ಭ ಆರೋಪಿಗಳು ಸಂಚರಿಸುತ್ತಿದ್ದ ಕಾರನ್ನು ತಡೆಯಲು ಪ್ರಯತ್ನಿಸಲಾಗಿತ್ತು. 

ಈ ಸಂದರ್ಭ ಆರೋಪಿಗಳ ಪತ್ತೆಗೆ ತಮ್ಮ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆರೆದ ಗೃಹ ರಕ್ಷಕ ದಳದ ಸಿಬ್ಬಂದಿಗಳಾದ ಮಲ್ಲಿಕಾ ಬಿ. ಮತ್ತು ಹರೀಶ್ ಪೂಜಾರಿ ಅವರನ್ನು ಗುರುವಾರ ಮಂಗಳೂರು ನಗರದ ಪೊಲೀಸ್ ಆಯುಕ್ತರು ತಲಾ 5,000 ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News