ಜ.14: ಮಾಸ್ತಿಕಟ್ಟೆಯಲ್ಲಿ ರಕ್ತದಾನ ಶಿಬಿರ, ಶುದ್ಧ ನೀರಿನ ಘಟಕದ ಉದ್ಘಾಟನೆ, ಸಾಧಕರಿಗೆ ಸನ್ಮಾನ
Update: 2018-01-12 17:24 IST
ಉಳ್ಳಾಲ, ಜ. 12: ಎಂಸಿಸಿ ಮತ್ತು ಆಝಾದ್ ಫ್ರೆಂಡ್ಸ್ ಸರ್ಕಲ್ ಉಳ್ಳಾಲ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಆಶ್ರಯದಲ್ಲಿ ಯೆನೆಪೊಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಇದರ ಸಹಯೋಗದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಶುದ್ಧ ನೀರಿನ ಘಟಕದ ಉದ್ಘಾಟನೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜ.14 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 2ರ ತನಕ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ನಡೆಯಲಿದೆ.
ಸಚಿವ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ, ಆಝಾದ್ ನಗರ ಜುಮಾ ಮಸೀದಿಯ ಖತೀಬ್ ಮುಹಮ್ಮದ್ ಖಲಂದರ್ ಸಖಾಫಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಳ್ಳಾಲ ನಗರ ಸಭೆ ಅಧ್ಯಕ್ಷ ಹುಸೈನ್ ಕುಂಞಿಮೋನು, ವಾಣಿ ಆಳ್ವ, ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ರಾಮ್ ರಾವ್, ಶ್ರೀ ಗೋಪಿ ಕೃಷ್ಣ ಹಾಗು ಇತರರು ಈ ಸಂದರ್ಭ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.