ಧನ್ಯಶ್ರೀ ಸಾವಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆಯಾಗಬೇಕಿದೆ: ಕೆ.ಬಿ.ಮಲ್ಲಿಕಾರ್ಜುನ

Update: 2018-01-12 16:46 GMT

ಕಡೂರು, ಜ.12: ಮೂಡಿಗೆರೆ ಪಟ್ಟಣದ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆಗೆ ಕಾರಣರಾದ ಭಜರಂಗದಳ, ಆರ್.ಎಸ್.ಎಸ್. ಕಾರ್ಯಕರ್ತರನ್ನು ತನಿಖೆಗೆ ಒಳಪಡಿಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕಿದೆ ಎಂದು ಮಾಜಿ ಶಾಸಕ ಕೆ.ಬಿ.ಮಲ್ಲಿಕಾರ್ಜುನ ತಿಳಿಸಿದರು. 

ಅವರು ಶುಕ್ರವಾರ ಕಡೂರು ಮತ್ತು ಬೀರೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಹಸೀಲ್ದಾರ್ ಕಛೇರಿ ಎದುರು ಮೂಡಿಗೆರೆ ಧನ್ಯಶ್ರೀ ಆತ್ಮಹತ್ಯೆಗೆ ಕಾರಣರಾದವರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದರು. 

ಧನ್ಯಶ್ರೀ ಆತ್ಮಹತ್ಯೆಯ ಬಗ್ಗೆ ತನಿಖೆಯಾಗಬೇಕಿದೆ. ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕಿದೆ. ಭಜರಂಗದಳ, ಆರ್.ಎಸ್.ಎಸ್. ನವರು ಕರಾವಳಿ ಭಾಗದಲ್ಲಿ ಕೋಮುವಾದ ಬಿತ್ತಿ ಜಾತಿಗಳ ಮಧ್ಯೆ ಕಲಹ ಹುಟ್ಟು ಹಾಕುತ್ತಿದ್ದಾರೆ. ಇವರು ಹತಾಶೆ ಭಾವನೆಯಿಂದ ಇಂತಹ ಕಾರ್ಯ ಮಾಡುತ್ತಿದ್ದಾರೆ. ಇಂತಹ ಸಂಘಟನೆಗಳನ್ನು ನಿಷೇಧ ಮಾಡಬೇಕಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಹೇಳಿದರು.

ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ವಿನಾಯಕ್ ಮಾತನಾಡಿ ಸ್ವಾಮಿ ವಿವೇಕಾನಂದರವರ ತತ್ವಗಳು ಬಿ.ಜೆ.ಪಿ. ಯವರಿಗೆ ಬೇಕಿಲ್ಲ. ಕೋಮುವಾದ ಹುಟ್ಟು ಹಾಕುತ್ತಾರೆ.  ಬೆಂಕಿ ಹೆಚ್ಚುವುದು ಇವರ ದಿನನಿತ್ಯದ ಕೆಲಸವಾಗಿದೆ. ದೇಶವನ್ನು ಅಭಿವೃದ್ಧಿಪಡಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಕೋಮುವಾದಿ ಪಕ್ಷವನ್ನು ಜನರೇ ತಿರಸ್ಕರಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ವನಮಾಲ ದೇವರಾಜ್, ಶರತ್, ಪುರಸಭಾ ಅಧ್ಯಕ್ಷ ಎಂ.ಮಾದಪ್ಪ, ಪುರಸಭಾ ಸದಸ್ಯರಾದ ಎನ್.ಬಷೀರ್‍ಸಾಬ್, ಸೋಮಶೇಖರ್, ಕಾಂಗ್ರೆಸ್ ಮುಖಂಡರಾದ ಕಲೀಮುಲ್ಲಾ ಷರೀಫ್, ಅಜ್ಜಯ್ಯ ಒಡೆಯರ್, ಜಿಮ್ ಶ್ರೀನಿವಾಸ್, ಕೆ.ಜಿ.ಲೋಕೇಶ್, ಚಂದ್ರಮೌಳಿ, ಕಲ್ಲೇಶ್, ಕೆ.ಜಿ.ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News