ಜ.19ಕ್ಕೆ ವಿಜಯಶಂಕರ್ ಕಾಂಗ್ರೆಸ್ ಸೇರ್ಪಡೆ

Update: 2018-01-12 17:05 GMT

ಮೈಸೂರು, ಜ.12: ಜ.19ಕ್ಕೆ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರುತ್ತೇನೆಂದು ವಿಧಾನಪರಿಷತ್ ಮಾಜಿ ಸದಸ್ಯ ಸಿ.ಎಚ್.ವಿಜಯಶಂಕರ್ ತಿಳಿಸಿದರು.

ರಾಮಕೃಷ್ಣ ನಗರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದ ಮುಂಭಾಗದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 19ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಇಂದು ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಅಂದು ನನ್ನ ಜೊತೆ ನನ್ನ ಹಲವು ಬೆಂಬಲಿಗರು ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದರು.

ಅಂದು ಕೆಲವರ ಮುಖವಾಡ ಬಯಲುಮಾಡುತ್ತೇನೆ. ಹಲವರ ಬಂಡವಾಳ ಬೆಳಕಿಗೆ ತರುತ್ತೇನೆ.ಯಾಕಾಗಿ ಪಕ್ಷ ಬಿಟ್ಟೆ ಎನ್ನುವುದನ್ನು ಆ ವಿಶೇಷ ಸಂದಭರ್ದಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News