×
Ad

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

Update: 2018-01-12 22:54 IST

ವಿಜಯಪುರ, ಜ. 12: ಇತ್ತೀಚೆಗೆ ನಡೆದಿದ್ದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆಗೈದ ಕೃತ್ಯ ಜನರ ನೆನಪಿನಿಂದ ಮಾಸುವ ಮುನ್ನವೇ ನೀರು ಕೇಳುವ ನೆಪದಲ್ಲಿ ಮನೆಯೊಂದಕ್ಕೆ ನುಗ್ಗಿದ ವ್ಯಕ್ತಿ ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದ ಅಮಾನವೀಯ ಘಟನೆ ಇಲ್ಲಿನ ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೃತ್ಯ ನಡೆಸಿದ ಆರೋಪಿಯನ್ನು ನೀಲಕಂಠಪ್ಪ ಕೋಣೆಗರ (40) ಎಂದು ಗುರುತಿಸಲಾಗಿದೆ. ಶುಕ್ರವಾರ ಆರೋಪಿ ತನ್ನ ಮೂವರು ಮುಸುಕುದಾರಿ ಸ್ನೇಹಿತರೊಂದಿಗೆ ತೋಟದ ಮನೆಯಲ್ಲಿ ಏಕಾಂಗಿಯಾಗಿದ್ದ ಬಾಲಕಿಯ ಮನೆಗೆ ಬಂದಿದ್ದು, ನೀರು ಕೇಳಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಬಾಲಕಿ ಮನೆಯೊಳಗೆ ನೀರು ತರಲು ಹೋದ ಸಂದರ್ಭದಲ್ಲಿ ಆಕೆಯ ಹಿಂದೆಯೆ ತೆರಳಿದ ಆರೋಪಿ ನೀಲಕಂಠ, ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆಂದು ಗೊತ್ತಾಗಿದೆ. ಅತ್ಯಾಚಾರಕ್ಕೆ ಸಹಕಾರ ನೀಡಿದ ಮೂವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ಚಡಚಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News