ಬಿಲ್ ಪಾವತಿಸಿಲ್ಲ ಎಂದು ರೋಗಿಯನ್ನು ಆಸ್ಪತ್ರೆಯಲ್ಲಿಯೇ ಉಳಿಸಲಾಗದು : ಬಾಂಬೆ ಹೈಕೋರ್ಟ್

Update: 2018-01-13 12:20 GMT

ಮುಂಬೈ,ಜ.13 : ಆಸ್ಪತ್ರೆಯ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ರೋಗಿಯೊಬ್ಬನನ್ನು ಆಸ್ಪತ್ರೆಯಲ್ಲಿಯೇ ಉಳಿಸಿಕೊಳ್ಳುವುದು ಕಾನೂನು ಬಾಹಿರವಾಗಿದೆ. ಪ್ರತಿಯೊಬ್ಬರಿಗೂ ಈ ಬಗ್ಗೆ ಅರಿವನ್ನುಂಟು ಮಾಡಬೇಕು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಬಿಲ್ ವಿವಾದಕ್ಕೆ ಸಂಬಂಧಿಸಿದಂತೆ ರೋಗಿಗಳನ್ನು ಆಸ್ಪತ್ರೆಯಲ್ಲಿಯೇ ಉಳಿಸಿಕೊಂಡ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯ ಮೇಲಿನ ವಿಚಾರಣೆ ನಡೆಸಿದ ಜಸ್ಟಿಸ್ ಎಸ್ ಸಿ ಧರ್ಮಾಧಿಕಾರಿ ಹಾಗೂ ಭಾರತ್ ಡಂಗ್ರೆ  ಅವರನ್ನೊಳಗೊಂಡ ಪೀಠವು ಮೇಲಿನಂತೆ ಹೇಳಿದೆಯಲ್ಲದೆ  ರೋಗಿಗಳ ಕಾನೂನಾತ್ಮಕ ಹಕ್ಕುಗಳು ಹಾಗೂ  ತಪ್ಪಿತಸ್ಥ ಆಸ್ಪತ್ರೆಗಳ ವಿರುದ್ಧ ಕೈಗೊಳ್ಳಬಹುದಾದ ಕ್ರಮಗಳ ಬಗೆಗಿನ ಮಾಹಿತಿಯನ್ನು ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸುವಂತೆಯೂ ಮಹಾರಾಷ್ಟ್ರಾದ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.

ಆದರೆ ಬಿಲ್ ಪಾವತಿಸದ ರೋಗಿಗಳನ್ನು ಅಕ್ರಮವಾಗಿ ಇರಿಸಿಕೊಳ್ಳುವ ಆಸ್ಪತ್ರೆಗಳ ವಿರುದ್ಧ ಯಾವುದೇ ನಿಯಂತ್ರಣ ಕ್ರಮಕ್ಕೆ ಸಂಬಂಧಿಸಿದ ಆದೇಶವನ್ನು ನ್ಯಾಯಾಲಯ ಹೊರಡಿಸಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News