ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕಕ್ಕೆ ಮೊಹಿದ್ದೀನ್ ಮೋನು ನೇಮಕ

Update: 2018-01-13 12:18 GMT

ಮಂಗಳೂರು, ಜ.13: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತರ ಘಟಕದ ಸಂಯೋಜಕರಾಗಿ ಮೊಹಿದ್ದಿನ್ ಮೋನು ಅವರನ್ನು ನೇಮಕ ಮಾಡಲಾಗಿದೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಸೂಚನೆಯ ಮೇರೆಗೆ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಖುರ್ಷಿದ್ ಅಹ್ಮದ್ ಸಹೀದ್ ನೇಮಕಾತಿ ಆದೇಶ ನೀಡಿದ್ದಾರೆ.

ಅಲ್ಪ ಸಂಖ್ಯಾತರ ಘಟಕವನ್ನು ಬಲಪಡಿಸಲು ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾಂಗ್ರೆಸ್ ಮುಂಖಂಡರೊಂದಿಗೆ ಪಕ್ಷದ ಘಟಕವನ್ನು ಮುನ್ನಡೆಸಲು ಈ ನೇಮಕಾತಿ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News