ಉಡುಪಿ: ರಾಷ್ಟ್ರೀಯ ಯುವ ದಿನಾಚರಣೆ, ವಿಚಾರ ಸಂಕಿರಣ

Update: 2018-01-13 14:49 GMT

ಉಡುಪಿ, ಜ. 13: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ವಿಚಾರ ಸಂಕಿರಣವನ್ನು ಶುಕ್ರವಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೋ, ಯುವ ಜನತೆಯಲ್ಲಿ ಮೂಲಭೂತ ಕರ್ತವ್ಯ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಗೀತಾ, ವಕೀಲರ ಸಂಘದ ರತ್ನಾಕರ ಶೆಟ್ಟಿ ಭಾಗವಹಿಸಿದ್ದರು.

ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಆಳ್ವ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಗಳಾದ ರವಿನಂದನ್ ಹಾಗೂ ಅನುಪಮಾ ಜೋಗಿ ಉಪಸ್ಥಿತರಿದ್ದರು. ಬಿಕಾಶ್ ಸ್ವಾಗತಿಸಿ, ರಿಯೋನ್ ವಂದಿಸಿ, ಎಲಿಯಾಸ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News