ಸಿಡ್ನಿ ಟೆನಿಸ್ ಓಪನ್: ಕೆರ್ಬರ್ ಚಾಂಪಿಯನ್

Update: 2018-01-13 18:36 GMT

ಸಿಡ್ನಿ, ಜ.13: ವಿಶ್ವದ ಮಾಜಿ ನಂ.1 ಆಟಗಾರ್ತಿ ಏಂಜೆಲಿಕ್ ಕೆರ್ಬರ್ ಸಿಡ್ನಿ ಇಂಟರ್‌ನ್ಯಾಶನಲ್ ಟೆನಿಸ್ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್ ಪ್ರಶಸ್ತಿ ಜಯಿಸಿದ್ದಾರೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಕೆರ್ಬರ್ ಆಸ್ಟ್ರೇಲಿಯದ ಅಶ್ಲೆಘ್ ಬಾರ್ಟಿ ಅವರನ್ನು 6-4, 6-4 ನೇರ ಸೆಟ್‌ಗಳಿಂದ ಮಣಿಸಿದರು. ಈ ಗೆಲುವಿನ ಮೂಲಕ ಮುಂದಿನ ವಾರ ಆರಂಭವಾಗಲಿರುವ ಆಸ್ಟ್ರೇಲಿಯನ್ ಓಪನ್‌ಗೆ ಭರ್ಜರಿ ತಯಾರಿ ನಡೆಸಿದರು. ಜರ್ಮನಿಯ ಎರಡು ಬಾರಿ ಗ್ರಾನ್‌ಸ್ಲಾಮ್ ಚಾಂಪಿಯನ್ ಕೆರ್ಬರ್ 2017ರಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದರು. ಪ್ರಸ್ತುತ ಅವರು ವಿಶ್ವ ಟೆನಿಸ್ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿದ್ದಾರೆ. 29ರ ಹರೆಯದ ಕೆರ್ಬರ್ 2016ರಲ್ಲಿ ಆಸ್ಟ್ರೇಲಿಯನ್ ಹಾಗೂ ಯುಎಸ್ ಓಪನ್ ಪ್ರಶಸ್ತಿ ಜಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News