ಐಪಿಎಲ್ ಹರಾಜು :1122 ಆಟಗಾರರು ನೊಂದಣಿ

Update: 2018-01-13 18:44 GMT

ಹೊಸದಿಲ್ಲಿ, ಜ.13: ತಿಂಗಳಾಂತ್ಯದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಆಟಗಾರರ ಹರಾಜಿನಲ್ಲಿ 11 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ 1,122 ಆಟಗಾರರು ನೊಂದಣಿ ಮಾಡಿಕೊಂಡಿದ್ದಾರೆ. ಮೆಗಾ ಐಪಿಎಲ್ ಹರಾಜು ಪ್ರಕ್ರಿಯೆ ಜ.27-28 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ವಿಶ್ವದ ಪ್ರಸಿದ್ಧ ಟ್ವೆಂಟಿ-20 ಲೀಗ್‌ಗೆ ಇಂಗ್ಲೆಂಡ್ ಟೆಸ್ಟ್ ನಾಯಕ ಜೋ ರೂಟ್ ತನ್ನ ಹೆಸರು ನೊಂದಾಯಿಸಿದ್ದಾರೆ. ಭಾರತದ ಸ್ಟಾರ್ ಆಟಗಾರರಾದ ಗೌತಮ್ ಗಂಭೀರ್, ಯುವರಾಜ್ ಸಿಂಗ್, ಆಫ್-ಸ್ಪಿನ್ನರ್‌ಗಳಾದ ಆರ್.ಅಶ್ವಿನ್ ಹಾಗೂ ಹರ್ಭಜನ್ ಸಿಂಗ್, ಅಜಿಂಕ್ಯ ರಹಾನೆ, ಕುಲ್‌ದೀಪ್ ಯಾದವ್ ಹಾಗೂ ಆರಂಭಿಕ ಆಟಗಾರರಾದ ಕೆ.ಎಲ್. ರಾಹುಲ್ ಹಾಗೂ ಎಂ.ವಿಜಯ್ ಹರಾಜು ಪಟ್ಟಿಯಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News