×
Ad

ಹನೂರು: ಜ.20 ರಂದು ಪರಿವರ್ತನಾ ಯಾತ್ರೆ

Update: 2018-01-14 20:52 IST

ಹನೂರು,ಜ.14 : ಬಿಜೆಪಿಯ ಯಡಿಯೂರಪ್ಪ ನೇತೃತ್ವದ ಪರಿವರ್ತನಾ ಯಾತ್ರೆಯ ರ್ಯಾಲಿಯು ಜ.20ಕ್ಕೆ ಹನೂರಿಗೆ ಆಗಮಿಸಲಿದ್ದು, ಕಾರ್ಯಕರ್ತರು ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದರ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖಾ ವಸತಿ ಗೃಹದಲ್ಲಿ ಭಾನುವಾರ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಅಧಿಕಾರವಧಿಯಲ್ಲಿ ರೈತರಿಗೆ, ದೀನ ದಲಿತರಿಗೆ, ಬಡವರಿಗೆ ಹಲವು ಉತ್ತಮ ಯೋಜನೆಗಳನ್ನು ರೂಪಿಸಿದ್ದು, ಉತ್ತಮ ಆಡಳಿತ ನೀಡಿದ್ದಾರೆ. ಅಲ್ಲದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದಲ್ಲಿ ಹಲವು ನೂತನ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ದೇಶದ ಜನತೆಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ. ಇವರ ಆಡಳಿತದ ವೈಖರಿಯ ಬಗ್ಗೆ ವಿಶ್ವದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಈ ದಿಸೆಯಲ್ಲಿ ಪಕ್ಷದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಜನರು ಪರಿರ್ವನೆಗೊಳ್ಳುತ್ತಿದ್ದಾರೆ. ಈಗಾಗಲೇ ಯಾತ್ರೆಯ ರ್ಯಾಲಿಯು ಹಲವು ಜಿಲ್ಲೆಗಳಲ್ಲಿ ಸಂಚರಿಸಿ ಜನರಿಂದ ಮೆಚ್ಚುಗೆ ಪಡೆದಿದ್ದು, ಪ್ರಸ್ತುತ ರಾಜ್ಯ ಸರ್ಕಾರದ ಧೋರಣೆಯಿಂದ ಬೇಸತ್ತು ರಾಜ್ಯದ ಜನತೆ ಪರಿವರ್ತನಾ ಯಾತ್ರೆಗೆ ಪ್ರೋತ್ಸಾಹ ನೀಡುತ್ತಿರುವುದು ಬಿಜೆಪಿಗೆ ಸಂದ ಗೌರವ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಸಿ.ಎಂ ರಾಜೇಂದ್ರಕುಮಾರ್, ಪರಿವರ್ತನಾ ಯಾತ್ರೆಯಿಂದ ರಾಜ್ಯದಲ್ಲಿನ ಜನತೆ ಪರಿರ್ವತನೆಯಾಗುತ್ತಿದ್ದಾರೆ. ಹನೂರು ಕ್ಷೇತ್ರದಲ್ಲೂ ಪರಿವರ್ತನೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಜ.20ರಂದು ಸಂಜೆ 5.30ಕ್ಕೆ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪರಿವರ್ತನಾ ಯಾತ್ರೆಯು ಹನೂರಿಗೆ ಆಗಮಿಸುತ್ತಿದೆ. ಅಂದು ಸತ್ತೇಗಾಲದಲ್ಲಿ ಯಾತ್ರೆಯನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಗುವುದು. ಬಳಿಕ ಹನೂರಿನ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪೂರ್ಣ ಕುಂಭಾಕಳಸದೊಂದಿಗೆ ಮೆರವಣಿಗೆ ನಡೆಸಿ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಮಾವೇಶಗೊಳ್ಳಲಾಗುವುದು. ಈಗಾಗಲೇ ಪಕ್ಷದ ವತಿಯಿಂದ ಸಂಚಲನ ಸಮಿತಿಯನ್ನು ರಚಿಸಲಾಗಿದ್ದು, ಪರಿವರ್ತನಾ ಯಾತ್ರೆಯ ಯಶಸ್ವಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗಾಗಿ ಪಕ್ಷದ ಕಾರ್ಯಕರ್ತರು ಸಕ್ರೀಯವಾಗಿ ಪಾಲ್ಗೊಳ್ಳುವುದರ ಮೂಲಕ ಯಾತ್ರೆಯ ಯಶಸ್ವಿಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪರಿಷತ್ ಸದಸ್ಯ ವೆಂಕಟಸ್ವಾಮಿ, ಚುನಾವಣಾ ವೀಕ್ಷಕ ಸುಂದರ್, ಹನೂರು ಘಟಕದ ಮಂಡಲಾಧ್ಯಕ್ಷ ರಾಜಶೇಖರ್, ಮುಖಂಡರಾದ  ಪೊನ್ನಾಚಿ ಮಹದೇವಸ್ವಾಮಿ, ಬಿ.ಕೆ ಶಿವಕುಮಾರ್, ವಿಷ್ಣುಕುಮಾರ್, ಮಂಗಲ ಮಂಟೇಸ್ವಾಮಿ, ಹನೂರಿನ ಮೂರ್ತಿ ಹಾಗೂ ಇನ್ನಿತರರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News