×
Ad

ವಾಟ್ಸ್ ಆ್ಯಪ್ ನಲ್ಲಿ ಧರ್ಮನಿಂದನೆಯ ಪೋಸ್ಟ್: ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು

Update: 2018-01-15 21:12 IST

ಬಂಟ್ವಾಳ, ಜ.15: ವಾಟ್ಸ್ ಆ್ಯಪ್ ನಲ್ಲಿ ಧರ್ಮನಿಂದನೆಯ ಪೋಸ್ಟ್ ಹಾಕಿರುವ ಆರೋಪದಡಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ.

ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

'ಮೀಡಿಯಾ ಆ್ಯಂಡ್ ರೈ ಸರ್' ಎಂಬ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳಕಾರಿ ಬರಹಗಳನ್ನು ಹಾಕುವ ಮೂಲಕ ವ್ಯಕ್ತಿಯೊಬ್ಬರು ಧರ್ಮನಿಂದನೆ ಮಾಡಿದ್ದಾರೆ. ಇದರಿಂದ ಮುಸ್ಲಿಮರ ಭಾವನೆಗೆ ಧಕ್ಕೆ ಉಂಟಾಗಿದೆ. ಈ ಸಂದೇಶದಿಂದ ಮುಸ್ಲಿಮರ ಬಗ್ಗೆ ಸಮಾಜಕ್ಕೆ ತಪ್ಪು ಕಲ್ಪನೆ ನೀಡಿದಂತಾಗಿದೆ. ಆದ್ದರಿಂದ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಠಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News