ಉಡುಪಿ: ಜಿಲ್ಲಾ ಬಾಸ್ಕೆಟ್‌ಬಾಲ್ ಪಂದ್ಯಾಟ

Update: 2018-01-16 15:36 GMT

ಮಣಿಪಾಲ, ಜ.16: ಉಡುಪಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ವತಿಯಿಂದ ಮಣಿಪಾಲದ ಮಾಹೆ ಸಹಯೋಗದೊಂದಿಗೆ ಕೆಎಂಸಿ ಬಾಸ್ಕೆಟ್‌ಬಾಲ್ ಕೋರ್ಟ್‌ನಲ್ಲಿ ಜ.19 ಮತ್ತು 20ರಂದು ಉಡುಪಿ ಜಿಲ್ಲಾ ಮಟ್ಟದ ಮುಕ್ತ ಬಾಸ್ಕೆಟ್‌ಬಾಲ್ ಪಂದ್ಯಾಟವನ್ನು ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಆಯೋಜಿಸಲಾಗಿದೆ.

ಉಡುಪಿ ಜಿಲ್ಲೆಯ ಕಾಲೇಜುಗಳು ಹಾಗೂ ಕ್ಲಬ್‌ಗಳು ಈ ಪಂದ್ಯಾಟದಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಕಾಲೇಜುಗಳ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತರಬೇಕು. ಆಸಕ್ತ ತಂಡಗಳು ಹೆಸರುಗಳನ್ನು ದೀಪಕ್ ಬಾಯರಿ (9900410776) ಇವರಲ್ಲಿ ನೊಂದಾಯಿಸಿಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News