ಹೊನ್ನಾವರ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಮಹಿಳೆಯರು
Update: 2018-01-16 21:26 IST
ಹೊನ್ನಾವರ, ಜ.16: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಗುರು ರಾಮೇಗೌಡ ಬಂಧಿತ ಆರೋಪಿ ಎನ್ನಲಾಗಿದೆ. ಮಂಗಳಾರ ಸಂಜೆ ಬಂದರ್ ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿಯೊಬ್ಬಳ ಮೇಲೆ ಗುರು ರಾಮೇಗೌಡ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದ. ಈ ಸಂದರ್ಭ ಇದನ್ನು ಗಮನಿಸಿದ ಸ್ಥಳೀಯ ಮಹಿಳೆಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.