ಉಗ್ರ ಗುಂಪುಗಳ ವಿರುದ್ಧ ಕ್ರಮಕ್ಕೆ ಅಮೆರಿಕ ಪಟ್ಟು

Update: 2018-01-16 17:58 GMT

ಇಸ್ಲಾಮಾಬಾದ್, ಜ. 16: ಪಾಕಿಸ್ತಾನದ ನೆಲದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಹಕ್ಕಾನಿ ನೆಟ್‌ವರ್ಕ್ ಮತ್ತು ಇತರ ಭಯೋತ್ಪಾದಕ ಗುಂಪುಗಳ ವಿರುದ್ಧ ಪಾಕಿಸ್ತಾನ ಕ್ರಮ ತೆಗೆದುಕೊಳ್ಳಬೇಕೆಂಬ ತನ್ನ ಬೇಡಿಕೆಯನ್ನು ಅಮೆರಿಕ ಮಂಗಳವಾರ ಪುನರುಚ್ಚರಿಸಿದೆ.

ಪಾಕಿಸ್ತಾನ ಪ್ರವಾಸದಲ್ಲಿರುವ ಅಮೆರಿಕದ ಉಸ್ತುವಾರಿ ಸಹಾಯಕ ವಿದೇಶಾಂಗ ಕಾರ್ಯದರ್ಶಿ ಆ್ಯಲಿಸ್ ವೆಲ್ಸ್, ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ತೆಹ್ಮೀನಾ ಜಂಜುವ ಮತ್ತು ಇತರ ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಈ ವಿಷಯ ಪ್ರಸ್ತಾಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News