ಕೊಟ್ಪಾ ದಾಳಿ: ದಂಡ ವಸೂಲಿ
Update: 2018-01-17 20:17 IST
ಉಡುಪಿ, ಜ.17: ಉಡುಪಿ ಜಿಲ್ಲೆಯಲ್ಲಿ ಕೊಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ಹೊಸ್ಮಾರು ಮತ್ತು ಪೆರ್ನೋಡಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಹೊಟೇಲ್ ಮತ್ತು ಬಾರ್‌ಗಳ ದಾಳಿ ನಡೆಸಲಾಯಿತು.
ದಾಳಿಯ ವೇಳೆ ಒಟ್ಟು 25 ಪ್ರಕರಣ ದಾಖಲಿಸಿ 3400 ರೂ. ದಂಡ ವಸೂಲಿ ಮಾಡಲಾಯಿತು. ದಾಳಿಯಲ್ಲಿ ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿ ಡಾ ಕೃಷ್ಣಾನಂದ, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೃಷ್ಣಪ್ಪ, ಹಿರಿಯ ಆರೋಗ್ಯ ಸಹಾಯಕ ಶಿವರಾಮ್ ಭಟ್, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧಪ್ಪ,ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ಜಿಲ್ಲಾ ಸಲಹೆಗಾರರಾದ ಮಮತಾ ನಾಯಕ್, ಎನ್‌ಟಿಸಿಪಿ ಸಮಾಜ ಕಾರ್ಯಕರ್ತೆ ಶೈಲಾ ಎಸ್.ಎಂ. ಉಪಸ್ಥಿತರಿದ್ದರು.