ಯುವ ಮತದಾರರಿಂದ ಪ್ರಜಾಪ್ರಭುತ್ವದ ಮೌಲ್ಯ ವೃದ್ಧಿ: ಡಾ.ದಿನೇಶ್ ಹೆಗ್ಡೆ
ಉಡುಪಿ, ಜ.17: ಯುವಜನರು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಮತದಾನ ಮಾಡಿದಾಗ ಪ್ರಜಾಪ್ರುತ್ವದ ವೌಲ್ಯ ಹೆಚ್ಚುತ್ತದೆ ಎಂದು ಬಸ್ರೂರು ಶಾರದ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಎಂ ದಿನೇಶ್ ಹೆಗ್ಡೆ ಹೇಳಿದ್ದಾರೆ.
ಉಡುಪಿಯ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಸಹಸ್ರಮಾನದ ಮತದಾರರ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಸಂಪ ನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.
ಚುನಾವಣೆಗಳನ್ನು ನಡೆಸಲು ಸ್ವತಂತ್ರ, ಸಂವಿಧಾನಬದ್ಧವಾದ ಚುನಾವಣಾ ಆಯೋಗವನ್ನು ರಚಿಸಲಾಗಿದ್ದು, ಈ ಆಯೋಗದ ಸ್ಥಾಪನಾ ದಿನವನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷ ಮತ ದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಹಸ್ರಮಾನದ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಇತಿಹಾಸ ವಿಭಾಗದ ಡಾ.ರಾಮದಾಸ ಪ್ರಭು, ಸಮಾಜಶಾಸ್ತ್ರ ವಿಭಾಗದ ಡಾ.ರಾಜೇಂದ್ರ ಕೆ. ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಎನ್.ನಿತ್ಯಾನಂದ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ್ ಭಂಡಾರಿ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಸುಚಿತ್ರ ಕಾರ್ಯಕ್ರಮ ನಿರ್ವಹಿಸಿದರು.