4 ರಾಜ್ಯಗಳಲ್ಲಿ ‘ಪದ್ಮಾವತ್’ಗೆ ನಿಷೇಧ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕರು

Update: 2018-01-17 16:18 GMT

ಹೊಸದಿಲ್ಲಿ, ಜ. 17: ವಿವಿಧ ರಾಜ್ಯ ಸರಕಾರಗಳು ಬಾಲಿವುಡ್ ಚಲನಚಿತ್ರ ಪದ್ಮಾವತ್ ಬಿಡುಗಡೆಗೆ ಹೇರಿರುವ ನಿಷೇಧ ಪ್ರಶ್ನಿಸಿ ಚಿತ್ರದ ನಿರ್ಮಾಪಕರು ಸಲ್ಲಿಸಿರುವ ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಕೊಂಡಿದೆ.

ವಿವಿಧ ರಾಜ್ಯ ಸರಕಾರಗಳು ಪದ್ಮಾವತ್ ಚಿತ್ರದ ಬಿಡುಗಡೆಗೆ ನಿಷೇಧ ವಿಧಿಸಿದ ಹಿನ್ನೆಲೆಯಲ್ಲಿ ಮನವಿಯ ವಿಚಾರಣೆ ತ್ವರಿತವಾಗಿ ನಡೆಸುವಂತೆ ಕೋರಿ ನಿರ್ಮಾಪಕ ಪರ ನ್ಯಾಯವಾದಿ ಸಲ್ಲಿಸಿದ್ದ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ಹಾಗೂ ಡಿ.ಡಿ. ಚಂದ್ರಚೂಡ ಅವರನ್ನೊಳಗೊಂಡ ಪೀಠ ವಿಚಾರಣೆಗೆ ಪರಿಗಣಿಸಿದೆ. ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟಾಗುತ್ತದೆ ಎಂದು ರಾಜಸ್ಥಾನ, ಹರ್ಯಾಣ, ಗುಜರಾತ್ ಹಾಗೂ ಮಧ್ಯಪ್ರದೇಶದಲ್ಲಿ ಪದ್ಮಾವತ್ ಚಲನಚಿತ್ರ ಪ್ರದರ್ಶನಕ್ಕೆ ನಿಷೇಧ ವಿಧಿಸಲಾಗಿದೆ. ಪದ್ಮಾವತ್ ಚಲನಚಿತ್ರ ಜನವರಿ 25ರಂದು ಬಿಡುಗಡೆಯಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News