×
Ad

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತರ ಧರಣಿ

Update: 2018-01-17 22:13 IST

ಚಿಕ್ಕಮಗಳೂರು, ಜ.17:  ತಮ್ಮವಿವಿಧ ಬೇಡಿಕೆಗಳನ್ನು ಈಡೇರಿಸಿಕೊಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ನೌಕರರ ಸಂಘ, ಅಕ್ಷರದಾಸೋಹ ಕಾರ್ಮಿಕರ ಸಂಘ ಮತ್ತು ಎಐಟಿಯುಸಿ ನೇತೃತ್ವದಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

2017ರ ನ.9, 10, 11ರಂದು ಎಐಟಿಯುಸಿ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‍ನಲ್ಲಿ ನಾವು ಬೃಹತ್ ಹೋರಾಟವನ್ನು ಹಮ್ಮಿಕೊಂಡಿದ್ದೆವು. ಎನ್‍ಡಿಎ ಸರಕಾರವು ದೇಶದ ಕೋಟ್ಯಂತರ ಕಾರ್ಮಿಕರ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ನಮ್ಮ ಸಮಸ್ಯೆಗಳನ್ನು ಬಗೆಹರಿಸಲು ಹೋರಾಟ ರೂಪಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಮನವಿಯಲ್ಲಿ ಪ್ರತಿಭಟನಾಕಾರರು ದೂರಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನಗೆಳಲ್ಲಿ ಸುಮಾರು 1 ಕೋಟಿ ಸ್ಕೀಂ ವರ್ಕರ್ಸ್ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ಎನ್.ಎಚ್.ಎಂ.ನಲ್ಲಿ ಸೇವೆ ಸಲ್ಲಿಸುತ್ತಿರುವ 10 ಲಕ್ಷ ಆಶಾ ಕಾರ್ಯಕರ್ತೆಯರು ಐಸಿಡಿಎಸ್ ಯೋಜನೆಯಲ್ಲಿ ಸೇವೆ ಸಲ್ಲಿಸುತ್ತಿರುವ 27 ಲಕ್ಷ ಅಂಗನವಾಡಿ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮದ್ಯಾಹ್ನದ ಬಿಸಿಯೂಟದ ಕಾರ್ಯಕರ್ತೆಯರು ಸೇರಿದ್ದಾರೆ. ಎಸ್‍ಎಸ್‍ಎ ಮತ್ತಿತರೆ ಯೋಜನೆಗಳಲ್ಲಿ ಹಲವು ಲಕ್ಷ ಮಂದಿ ಕೆಲಸ ಮಾಡುತ್ತಿದ್ದಾರೆ.

ಈ ಎಲ್ಲಾ ಯೋಜನೆಗಳು ದೇಶದ ಜನರಿಗೆ ಆರೋಗ್ಯ, ಪೌಷಿಕಾಂಶ, ಶಿಕ್ಷಣ ಮತ್ತಿತರೆ ಸೌಕರ್ಯಗಳನ್ನು ನೀಡುವ ಮಹತ್ವದ ಜನಕಲ್ಯಾಣ ಯೋಜನೆಗಳಾಗಿವೆ. ಆದರೆ ಈ ಮಹತ್ವಪೂರ್ಣ ಯೋಜನೆಗಳನ್ನು ಕಳೆದ 40 ವರ್ಷಗಳಿಂದ ಅನುಷ್ಟಾಣಗೊಳಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, 10 ವರ್ಷಗಳಿಂದ ಸೇವೆ ಸಲಲಿಸುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನನು ನೌಕರರು ಎಂದು ಪರಿಗಣಿಸುತ್ತಿಲ್ಲ.

ಈ ಸಮಯದಲ್ಲಿ ಎಐಟಿಯುಸಿಯ ರೇಣುಕಾರಾಧ್ಯ, ಮಂಜುಳಾ, ಲಕ್ಷ್ಮೀ ಮತ್ತಿತರರು ನೇತೃತ್ವ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News