ಟಿಪ್ಪರ್ ಢಿಕ್ಕಿ: ರಿಕ್ಷಾ ಚಾಲಕ ಮೃತ್ಯು
Update: 2018-01-17 22:26 IST
ಕಾರ್ಕಳ, ಜ.17: ಆನೆಕೆರೆ ಟಾಟಾ ಗ್ಯಾರೇಜ್ ಬಳಿ ಜ.16ರಂದು ಸಂಜೆ 5.30ಕ್ಕೆ ಟಿಪ್ಪರೊಂದು ಹಿಂದಕ್ಕೆ ಚಲಿಸಿ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಅನಿಲ್ ಸೋನ್ಸ್ ಎಂದು ಗುರುತಿಸಲಾಗಿದೆ. ಟಿಪ್ಪರನ್ನು ಚಾಲಕ ಹಿಂದಕ್ಕೆ ಚಲಾಯಿಸಿ ರಾಧಾಕೃಷ್ಣ ಸಭಾಭವನದ ಕಡೆಯಿಂದ ಆನೆಕೆರೆ ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಆಟೋ ರಿಕ್ಷಾ ಚಾಲಕ ಅನಿಲ್ ಸೋನ್ಸ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡರು. ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸೋನ್ಸ್ ಚಿಕಿತ್ಸೆ ಫಲಕಾರಿಯಾಗದೆ ಜ.17ರಂದು ಬೆಳಗ್ಗೆ 9ಗಂಟೆಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.