×
Ad

ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಯುವ ಸಾಧಕ ರಘುವೀರ್ ಸೂಟರ್ ಪೇಟೆ

Update: 2018-01-17 22:45 IST

ಮಂಗಳೂರು, ಜ. 17: ಉತ್ತರ ಪ್ರದೇಶದ ನೊಯಿಡಾದಲ್ಲಿ ಜ.12ರಿಂದ 16ರವೆಗೆ ಯುವ ಸಾಧಕರ ಸಮಾವೇಶದಲ್ಲಿ ಮಂಗಳೂರು ಸೂಟರ್ ಪೇಟೆಯ ಯುವ ಸಾಧಕ ರಘು ವೀರ್ ಸೂಟರ್ ಪೇಟೆ ಭಾಗವಹಿಸಿದ್ದಾರೆ.

ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಭಾರತ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ವತಿಯಿಂದ ದೇಶ, ವಿದೇಶ, ರಾಜ್ಯ, ಜಿಲ್ಲೆಗಳಲ್ಲಿ ಸಾಧನೆ ಮಾಡಿದ ಯುವ ಸಾಧಕರನ್ನು ಗುರುತಿಸಿ 6 ದಿನಗಳ ಕಾಲ ಹಮ್ಮಿಕೊಂಡ ರಾಷ್ಟ್ರೀಯ ಯುವ ಸಬಲೀಕರಣ ಕಾರ್ಯಕ್ರಮದಲ್ಲಿ ಸಾಧಕರೊಂದಿಗೆ ಮಾಹಿತಿ, ವಿಚಾರ ವಿನಿಮಯ, ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ರಘುವೀರ್ ಭಾಗವಹಿಸಿದ್ದರು.

ಸಮಾರಂಭದಲ್ಲಿ ಉತ್ತರ ಪ್ರದೇಶದ ಮುಖ್ಯ ಮಂತ್ರಿ  ಆದಿತ್ಯ ನಾಥ್, ಕ್ರೀಡಾ ಸಚಿವ ರಾಜವರ್ಧನ ಸಿಂಗ್ ಹಾಗೂ ಸರಕಾರದ ಉನ್ನತ ಮಟ್ಟದ ಅಧಿಕಾರಿಗಳು ಮೊದಲಾದವರು ಭಾಗವಹಿಸಿದ್ದರು.

ಯುವ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರದ ವ್ಯವಸ್ಥೆಯನ್ನು ಕಾರ್ಯಕ್ರಮದಲ್ಲಿ ಅಳವಡಿಸಲಾಗಿತ್ತು. ಕೇಂದ್ರ, ರಾಜ್ಯಗಳ ಅಭಿವೃದ್ಧಿ ಯೋಜನೆಗಳಲ್ಲಿ ಯುವ ಜನರ ಅಭಿವೃದ್ಧಿ ಮತ್ತು ಯುವ ಸಬಲೀಕರಣ, ಯುವ ಸಾಧಕರಿಂದ ಮಾಹಿತಿ ವಿನಿಮಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳಲ್ಲಿ ರಘುವೀರ್ ಸೂಟರ್ ಪೇಟೆ ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News