ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ

Update: 2018-01-18 12:42 GMT

ಚಿಕ್ಕಮಗಳೂರು, ಜ.18: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಿಕ್ಕಮಗಳೂರಿನ 1 ನೇ ಹೆಚ್ಚುವರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 

2015 ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತ್ಯಾಚಾರ ಪ್ರಕರಣ ನಡೆದಿತ್ತು. ಆರೋಪಿ ರವಿ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ವಿರುದ್ದ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ 1 ನೇ ಹೆಚ್ಚುವರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರು ಆರೋಪಿ ರವಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಪರಿಗಣಿಸಿ, ಜೀವಾವಧಿ ಶಿಕ್ಷೆ ಹಾಗೂ 57 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ವಿಶೇಷ ಅಭಿಯೋಜಕರು ಆರ್.ನಾಗರಾಜ್ ವಾದ ಮಂಡನೆ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News