ನಾಯಿಗಳ ದಾಳಿಗೆ ಜಿಂಕೆ ಸಾವು

Update: 2018-01-18 13:09 GMT

ಮೂಡಿಗೆರೆ, ಜ.18:ನಾಯಿಗಳು ಜಿಂಕೆಯೊಂದನ್ನು ಅಟ್ಟಾಡಿಸಿ ತೀವ್ರವಾಗಿ ಗಾಯಗೊಳಿಸಿದ ಹಿನ್ನೆಲೆಯಲ್ಲಿ ಜಿಂಕೆಯು ಸಾವಿಗೀಡಾಗಿರುವ ಘಟನೆ ಕಿರುಗುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದುಸೆ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಉದುಸೆ ಗ್ರಾಮದ ಗೋಕುಲ್ ಎಸ್ಟೇಟ್ ಗೇಟ್ ಸಮೀಪ ನಾಯಿಗಳು ಜಿಂಕೆಯೊಂದನ್ನು ಬೆನ್ನಟ್ಟಿ ಗಾಯಗೊಳಿಸಿತ್ತು. ಇದನ್ನು ಕಂಡ ಸ್ಥಳೀಯರು ನಾಯಿಗಳ ಬಾಯಿಯಿಂದ ಜಿಂಕೆಯನ್ನು ರಕ್ಷಿಸಿ ಮೂಡಿಗೆರೆ ಪಶು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು ಸಾವಿಗೀಡಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News