×
Ad

ವಾಮದಪದವು: ಪುರುಷರ ಹ್ಯಾಂಡ್‌ಬಾಲ್ ಪಂದ್ಯಾಟ

Update: 2018-01-18 19:50 IST

ಬಂಟ್ವಾಳ, ಜ. 18: ಸಾಮರಸ್ಯ ಭಾರತದ ನಿರ್ಮಾಣದಲ್ಲಿ ಕ್ರೀಡೆಯು ಮಹತ್ವ ಪಡೆದಿದೆ. ಕ್ರೀಡೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ವ್ಯಕ್ತಿಯೊಬ್ಬ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಪುರುಷರ ಹ್ಯಾಂಡ್‌ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶವಾದರೂ ವಾಮದಪದವು ಕಾಲೇಜು ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ, ಮಂಗಳೂರು ವಿಶ್ವವಿದ್ಯಾನಿಲಯ ವೀಕ್ಷಕ ಪ್ರೊ. ಹರಿದಾಸ್ ಕೂಳೂರು, ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಶೆಟ್ಟಿ ವಿಜಯನಗರ, ಬಂಟ್ವಾಳ ರೋಟರಿ ಕ್ಲಬ್‌ನ ಅಧ್ಯಕ್ಷ ಸಂಜೀವ ಪೂಜಾರಿ, ಲೋರೆಟ್ಟೊ ರೋಟರಿ ಕ್ಲಬ್ ಅಧ್ಯಕ್ಷ ಅವಿಲ್ ಮಿನೇಜಸ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯಅಮ್ಮು ರೈ ಹರ್ಕಾಡಿ, ಜಯಪ್ರಕಾಶ್ ಶೆಟ್ಟಿ ಬುಳೇರಿ, ನವೀನ್‌ಚಂದ್ರ ಶೆಟ್ಟಿ, ಶ್ರೀಧರ್ ಪೈ, ಕಿಶೋರ್ ಕುಮಾರ್ ನಾಯರ್‌ಕುಮೇರ್, ಜಯಚಂದ್ರ ಬೊಳ್ಮಾರ್, ಅನಂತ ಪೈ, ಯುವರಾಜ್ ಆಳ್ವ, ಕಾಲೇಜಿನ ಕ್ರೀಡಾ ನಿರ್ದೇಶಕ ರಾಧಾಕೃಷ್ಣ ಎಚ್. ಬಿ. ಉಪಸ್ಥಿತರಿದ್ದರು.

ಉಪನ್ಯಾಸಕರಾದ ಡಾ. ರವಿ. ಎಂ.ಎನ್. ಸ್ವಾಗತಿಸಿದರು, ಪ್ರೊ. ರೋನಾಲ್ಡ್ ಪ್ರವೀಣ್ ಕೊರೆಯ ವಂದಿಸಿದರು. ಪ್ರೊ. ಕೃಷ್ಣಮೂರ್ತಿ ಎನ್.ಬಿ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News