×
Ad

ಕಲ್ಲಡ್ಕದ ಇಬ್ರಾಹೀಂ ಖಲೀಲ್ ಗಡಿಪಾರಿಗೆ ತಾತ್ಕಾಲಿಕ ತಡೆಯಾಜ್ಞೆ

Update: 2018-01-19 18:56 IST

ಮಂಗಳೂರು, ಜ. 19: ಕಲ್ಲಡ್ಕದ ನಿವಾಸಿ ಖಲೀಲ್ ಗಡಿಪಾರು ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ದ.ಕ. ಜಿಲ್ಲೆಯಲ್ಲಿ ನಡೆಯುವ ಕೋಮುಗಲಭೆಗೆ ಮೂಲ ಕಾರಣರಾಗುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಕಳೆದ ತಿಂಗಳು ಇಬ್ಬರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ಆದೇಶ ಹೊರಡಿಸಿದ್ದರು.

ಗಡಿಪಾರು ಆದೇಶವನ್ನು ಪ್ರಶ್ನಿಸಿ ಕಲ್ಲಡ್ಕದ ಖಲೀಲ್ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಅಫೀಲು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀ ಶರು, ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಶುಕ್ರವಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ಹೈಕೋರ್ಟ್ ವಕೀಲರಾದ ಲತೀಫ್ ಬೆಂಗಳೂರು ಖಲೀಲ್ ಪರ ವಾದಿಸಿದ್ದರು. 

ಕೆಲ ದಿನಗಳ ಹಿಂದೆ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಲಡ್ಕ ರತ್ನಾಕರ ಶೆಟ್ಟಿ ಗಡಿಪಾರು ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News