ಮಧ್ಯಪ್ರದೇಶದ ನೂತನ ರಾಜ್ಯಪಾಲರಾಗಲಿರುವ ಗುಜರಾತ್ ಮಾಜಿ ಸಿಎಂ ಆನಂದಿಬೆನ್

Update: 2018-01-19 16:10 GMT

ಅಹ್ಮದಾಬಾದ್, ಜ.19: ಗುಜರಾತ್ ರಾಜ್ಯ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಮಧ್ಯಪ್ರದೇಶದ ನೂತನ ರಾಜ್ಯಪಾಲರಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಮಧ್ಯಪ್ರದೇಶದ ರಾಜ್ಯಪಾಲರಾಗಿರುವ ಓಂ ಪ್ರಕಾಶ್ ಕೊಹ್ಲಿ ಗುಜರಾತ್ ನ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸುತ್ತಿದ್ದರು. 2014ರಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಆನಂದ್ ಬೆನ್ ಗುಜರಾತ್ ಸಿಎಂ ಆಗಿ ಅಧಿಕಾರಿ ಸ್ವೀಕರಿಸಿದ್ದರು. 2016 ಆಗಸ್ಟ್ ನಲ್ಲಿ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಯುವಜನರಿಗೆ ಆದ್ಯತೆ ನೀಡುವ ಸಲುವಾಗಿ ತಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ಆನಂದಿ ಬೆನ್ ಹೇಳಿದ್ದರೂ, ಪಾಟಿದಾರ್ ಚಳುವಳಿ ಹಾಗು ಉನಾದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯದ ನಂತರದ ಹೋರಾಟಗಳು ಅವರ ರಾಜೀನಾಮೆಗೆ ಕಾರಣ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News