ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಲು ಬೆಂವಿವಿಗೆ ಹೈಕೋರ್ಟ್ ನಿರ್ದೇಶನ

Update: 2018-01-19 16:40 GMT

ಬೆಂಗಳೂರು, ಜ.19: ಮಾನಸ ಎಜುಕೇಷನ್ ಟ್ರಸ್ಟ್ ಅಧೀನದ ಬಿಟಿಎಂ ಅಧ್ಯಯನ ಕೇಂದ್ರ ಸೇರಿದಂತೆ ಆರು ಅಧ್ಯಯನ ಕೇಂದ್ರಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿವಿಧ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಸುಮಾರು 100 ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸುವಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಮಾನಸ ಎಜುಕೇಷನ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಅರ್ಜಿದಾರರ ಪರ ವಾದಿಸಿದ ವಕೀಲೆ ಸುಮನ್ ಹೆಗಡೆ, ಮಾನಸ ಎಜುಕೇಷನ್ ಟ್ರಸ್ಟ್ ಅಧೀನದ ಅಧ್ಯಯನ ಕೇಂದ್ರಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬೆಂವಿವಿ ನಿರಾಕರಿಸಿದೆ. ಈ ಅಧ್ಯಯನ ಕೇಂದ್ರಗಳಿಗೆ ನೀಡಿದ್ದ ಅಫಿಲಿಯೇಷನ್ ಕೂಡ ರದ್ದುಪಡಿಸಿದೆ ಎಂದು ಪೀಠಕ್ಕೆ ತಿಳಿಸಿದರು.

ಪರೀಕ್ಷೆಯು ಇದೇ 22ರಿಂದ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳೂ ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಅಧ್ಯಯನ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ಈ ಎಲ್ಲ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸುವಂತೆ ಬೆಂವಿವಿಗೆ ನಿರ್ದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News