ಉಡುಪಿ: ಸಪಾಯಿ ಕರ್ಮಚಾರಿಗಳಿಗೆ ಅರಿವು ಮಾಹಿತಿ

Update: 2018-01-19 17:03 GMT

ಉಡುಪಿ, ಜ.19: ಬೆಂಗಳೂರಿನ ಸಪಾಯಿ ಕರ್ಮಚಾರಿ ಆಯೋಗ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಪಾಯಿ ಕರ್ಮಚಾರಿಗಳ, ಮ್ಯಾನುವೆಲ್ ಸ್ಕ್ಯಾವೆಂಜರುಗಳ ವೃತ್ತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ-2013ರಡಿ ಸರಕಾರದ ಕಾನೂನುಗಳು ಹಾಗೂ ಸರಕಾರದ ವಿವಿಧ ಇಲಾಖೆಗಳಿಂದ ದೊರೆಯುವ ಸೌಲ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವೊಂದು ಜ.25ರಂದು ಉಡುಪಿಯಲ್ಲಿ ನಡೆಯಲಿದೆ.

ಕಾರ್ಯಕ್ರಮವು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿ ಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News