ಬೆಳ್ಳಂದೂರು ಕೆರೆಯಲ್ಲಿ ಬೆಂಕಿ

Update: 2018-01-20 06:49 GMT

ಬೆಂಗಳೂರು, ಜ.20:  ನಗರದ ಬೆಳ್ಳಂದೂರು ಕೆರೆಯಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿರುವ ಬೆಂಕಿಯನ್ನು ನಂದಿಸಲು ಅಗ್ನಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಮುಂದುವರಿಸಿದ್ದರೂ, ಇನ್ನೂ ಹತೋಟಿಗೆ ತರಲು ಸಾಧ್ಯವಾಗಿಲ್ಲ. ಸ್ಥಳದಲ್ಲಿ ದಟ್ಟ ಹೊಗೆ ಹರಡಿದೆ.

ಬೆಂಕಿ ಸುಮಾರು 2 ಕಿ.ಮೀ ದೂರದ ತನಕ ಹರಡಿದ್ದು, ಒಂದು ಕಡೆ ಬೆಂಕಿ ನಂದಿಸಿದರೂ, ಇನ್ನೊಂದು ಕಡೆ ಹೊತ್ತಿಕೊಳ್ಳುತ್ತಿದೆ. ರಾಜ್ಯ ವಿಪತ್ತು ದಳ ಸಿಬ್ಬಂದಿಗಳು ಮತ್ತು   ಅಗ್ನಿ ಶಾಮಕ ದಳದ 250ಕ್ಕೂ ಅಧಿಕ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಈ ಬಾರಿ ತೀವ್ರ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News