ಮಧ್ಯಪ್ರದೇಶ: ಪೌರಸಂಸ್ಥೆ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್

Update: 2018-01-20 12:40 GMT

ಭೋಪಾಲ, ಜ.20: ಮಧ್ಯಪ್ರದೇಶದ ರಘೋಗಡ ಪೌರಾಡಳಿತ ಸಂಸ್ಥೆಯ 24 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 20ರಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಮರ್ಮಾಘಾತ ನೀಡಿದೆ. ಇಲ್ಲಿ ಬಿಜೆಪಿ ಕೇವಲ 4 ಸ್ಥಾನ ಗೆಲ್ಲಲಷ್ಟೇ ಶಕ್ತವಾಗಿದೆ.

ಈ ವರ್ಷಾಂತ್ಯ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಇದಿರೇಟು ನೀಡಲು ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್‌ಗೆ ಈ ಗೆಲುವು ನೈತಿಕ ವಿಶ್ವಾಸ ಹೆಚ್ಚಿಸಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 2003ರಿಂದ ಅಧಿಕಾರ ಕಳೆದುಕೊಂಡಿದ್ದು, ತನ್ನ ಭದ್ರಕೋಟೆ ಎಂದೆನಿಸಿರುವ ರಘೋಗಡದಲ್ಲಿ ಪ್ರಭಾವ ಉಳಿಸಿಕೊಳ್ಳಲು ಶಕ್ತವಾಗಿದೆ. ರಾಜ್ಯಾದ್ಯಂತ ನಡೆದ ವಿವಿಧ ಪೌರಾಡಳಿತ ಸಂಸ್ಥೆಗಳ ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 2 ಹಾಗೂ ಪಕ್ಷೇತರರು ಒಂದರಲ್ಲಿ ಗೆಲುವು ಸಾಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News