ಶಿರಾಡಿ ಘಾಟ್ ರಸ್ತೆ ಬಂದ್: ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನ ದಟ್ಟಣೆ

Update: 2018-01-21 13:00 GMT

ಚಿಕ್ಕಮಗಳೂರು, ಜ.21: ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ48ರ ಶಿರಾಡಿ ಘಾಟ್ ರಸ್ತೆ ಬಂದ್ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದೆ.

ನಿನ್ನೆಯಿಂದ ಶಿರಾಡಿ ಘಾಟ್ ರಸ್ತೆಯನ್ನು ಕಾಮಗಾರಿ ನಿಮಿತ್ತ ಬಂದ್ ಗೊಳಿಸಿ ಪರ್ಯಾಯ ಮಾರ್ಗವಾಗಿ ಚಾರ್ಮಾಡಿ ಘಾಟ್ ರಸ್ತೆಯನ್ನು ಅವಲಂಬಿಸಿರುವ ಕಾರಣದಿಂದ ಆಗಿಂದಾಗ್ಗೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟ್ ರಸ್ತೆಯ ಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. 

ಕೆಲವೆಡೆ ದೂರದಿಂದ ಬರುವ ಪ್ರವಾಸಿಗರು ಹಾಗೂ ವಾಹನ ಸವಾರರ ಪರದಾಡುವಂತಾಗಿದೆ. ಭಾರೀ ಪ್ರಮಾಣದ ವಾಹನಗಳು ಹಾಗೂ ಲಾರಿಗಳ ಸಂಚಾರಕ್ಕೆ ಅವಕಾಶ ಕೊಟ್ಟಿರೋದಕ್ಕೆ ಜನರು ವಿರೋಧ ವ್ಯಕ್ತವಾಗುತ್ತಿದೆ. ಚಾರ್ಮಾಡಿ ಘಾಟ್ ರಸ್ತೆಯು ಕಿರಿದಾಗಿರುವ ಹಿನ್ನೆಲೆಯಲ್ಲಿ ಈ ಹೆದ್ದಾರಿಯಲ್ಲಿ ದೊಡ್ಡ ಗಾತ್ರದ ಅಥವಾ ಉದ್ದವಾದ ವಾಹನಗಳ ಸಂಚಾರವನ್ನು ತಡೆಯುವಂತೆ ವಾಹನ ಸವಾರರು ಹಾಗೂ ಪ್ರಯಾಣಿಕರು, ಪ್ರವಾಸಿಗಳ ಆಗ್ರಹವಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News