ಉಚ್ಚಿಲ: ಪಾದಚಾರಿಗೆ ಢಿಕ್ಕಿಯಾಗಿ ಕಮರಿಗೆ ಉರುಳಿದ ಬೈಕ್

Update: 2018-01-21 10:22 GMT

ಉಳ್ಳಾಲ, ಜ.21: ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ರಸ್ತೆ ಬದಿಯ ಕಮರಿಗೆ ಉರುಳಿಬಿದ್ದ ಘಟನೆ ರವಿವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಸಂಕೋಲಿಗೆ ಎಂಬಲ್ಲಿ ನಡೆದಿದೆ.

ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಮರಿಗೆ ಬಿದ್ದಿದೆಯೆನ್ನಲಾಗಿದೆ. ಪರಿಣಾಮ ಬೈಕ್ ಸವಾರ ಹಾಗೂ ಪಾದಚಾರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News