ಮಡಿಕೇರಿ: ಫೆ.8 ರಂದು ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ

Update: 2018-01-21 11:39 GMT

ಮಡಿಕೇರಿ,ಜ.21:ಕೊಡಗು ಜಿಲ್ಲಾ ಸರಕಾರಿ ಮಾದರಿ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಫೆ.8 ರಂದು ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ ಮತ್ತು ಶೈಕ್ಷಣಿಕ ವಿಚಾರಗೋಷ್ಠಿ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷರಾದ ಎನ್.ಕೆ. ಪ್ರಭು,  ಅಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಬಿ.ಎ.ಹರೀಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಶಿ ಸಬ್ರಮಣಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಬಿ.ಕೆ. ರವಿ, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಚೇತನ್, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯಾದ ಎಲ್.ಅಶ್ವತ್ಥಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. 

ಕೊಡಗು ಜಿಲ್ಲಾ ಸರಕಾರಿ ಮಾದರಿ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ 125 ಸದಸ್ಯರನ್ನು ಹೊಂದಿದ್ದು, ಪ್ರಸ್ತುತ 52 ಮುಖ್ಯೋಪಾಧ್ಯಾಯರು ನಿವೃತ್ತರಾಗಿದ್ದು, ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ. ಇದರೊಂದಿಗೆ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಿಚಾರಗೋಷ್ಠಿ ನಡೆಸಲಾಗುತ್ತದೆಂದರು.

ಇದರೊಂದಿಗೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳ ಬಡ್ತಿ ಹೊಂದಿದ ಮುಖ್ಯ ಶಿಕ್ಷಕರನ್ನು ಒಂದೆಡೆ ಸೇರಿಸಿ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ  ಎಲ್ಲಾ ಮುಖ್ಯ ಶಿಕ್ಷಕರು ಪಾಲ್ಗೊಳ್ಳುವಂತೆ ಪ್ರಭು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಸರಕಾರಿ ಮಾದರಿ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಉಪಾಧ್ಯಕ್ಷರಾದ ಹೆಚ್.ಕೆ. ಕುಮಾರ್, ಕಾರ್ಯದರ್ಶಿ ಬಿ.ದೇವಕ್ಕಿ, ಸಹಾ ಕಾರ್ಯದರ್ಶಿ ವಿ.ಕೆ. ಲೀಲಾವತಿ ಹಾಗೂ ಖಜಾಂಚಿ ಎಮ್.ಗಣೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News