ಉಡುಪಿ: ಬಂಟರ ಸಂಘದ ವಾರ್ಷಿಕ ಅಧಿವೇಶನ: ಸನ್ಮಾನ- ಪ್ರತಿಭಾ ಪುರಸ್ಕಾರ

Update: 2018-01-21 12:10 GMT

ಉಡುಪಿ, ಜ. 21: ಉಡುಪಿ ಬಂಟರ ಸಂಘದ 23ನೆ ವರ್ಷದ ವಾರ್ಷಿಕ ಅಧಿವೇಶನದ ಪ್ರಯುಕ್ತ ಸಾಧಕರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ರವಿವಾರ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು ಎಂ.ಆರ್.ಜಿ. ಗ್ರೂಪ್ಸ್‌ನ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ, ನಾವು ಗಳಿಸಿದ ಸಂಪಾದನೆ ಯನ್ನು ಸಂಸ್ಕಾರದ ಮೂಲಕ ಸತ್ಕಾರಕ್ಕೆ ಬಳಸಿದರೆ ಜೀವನದಲ್ಲಿ ಯಶಸ್ವಿ ಗಳಿಸಲು ಸಾಧ್ಯವಾಗುತ್ತದೆ. ಬಂಟರು ಹೃದಯ ಶ್ರೀಮಂತಿಕೆ ಉಳ್ಳವರು ಎಂದು ಹೇಳಿದರು.

ಧಾರವಾಡದ ಉದ್ಯಮಿ ಯು.ಬಿ.ಶೆಟ್ಟಿ, ಮುಂಬಯಿ ಉದ್ಯಮಿ ರವಿ ಎಸ್. ಶೆಟ್ಟಿ, ಉಡುಪಿಯ ಉದ್ಯಮಿ ಪುರುಷೋತ್ತಮ ಪಿ.ಶೆಟ್ಟಿ ಮುಖ್ಯ ಅತಿಥಿಗಳಾಗಿ ದ್ದರು. ಮಂಗಳೂರು ಎಸ್.ಡಿ.ಎಂ.ಸಿ. ಆಯುರ್ವೇದ ಆಸ್ಪತ್ರೆಯ ಆಡಳಿತಾಧಿ ಕಾರಿ ಡಾ.ಪ್ರತಿಭಾ ರೈ ದಿಕ್ಸೂಚಿ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು, ವೈಧ್ಯಕೀಯ ಚಿಕಿತ್ಸೆಗಾಗಿ ನೆರವು, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಅಂಗವಿಕಲಕರಿಗೆ ಆರ್ಥಿಕ ಸಹಾಯ ಸೇರಿದಂತೆ ಒಟ್ಟು 400ಕ್ಕೂ ಅಧಿಕ ಫಲಾನುಭವಿಗಳಿಗೆ 8 ಲಕ್ಷಕ್ಕೂ ಅಧಿ ಆರ್ಥಿಕ ನೆರವನ್ನು ನೀಡಲಾಯಿತು.

ವೇದಿಕೆಯಲ್ಲಿ ಉದ್ಯಮಿ ನಾಗೇಶ್ ಹೆಗ್ಡೆ, ಆಶಾಜ್ಯೋತಿ ರೈ, ಸಂಘದ ಗೌರವಾಧ್ಯಕ್ಷ ಕೆ.ಜಯರಾಮ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯ ದರ್ಶಿ ಮೋಹನ್ ಶೆಟ್ಟಿ ಮೂಡನಿಡಂಬೂರು ವರದಿ ವಾಚಿಸಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೂ ಮುನ್ನ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ಉಡುಪಿಯ ಪ್ರಸಿದ್ಧ ಭಾರ್ಗವಿ ನೃತ್ಯ ತಂಡದಿಂದ ಭಾವಯೋಗಗಾನ ನೃತ್ಯ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಸಭಾ ಕಾರ್ಯಕ್ರಮದ ಬಳಿಕ ಬಡಗುತಿಟ್ಟಿನ ಶ್ರೇಷ್ಠ ಕಲಾವಿದರ ಕೂಡುವಿಕೆಯಲ್ಲಿ ಬೇಡರಕಣ್ಣಪ್ಪ ಯಕ್ಷಗಾನ ಪ್ರದರ್ಶನ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News